ಸ್ವಯಂ ಉದ್ಯೋಗ ಮಾಡಲು 50,000 ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Self employment subsidy scheme

<Krushirushi> <Self employment subsidy scheme> <Subsisy scheme> <Subsidy> <ಹಣ> <ಸಂದಾಯ> <ಆಧಾರ್> ಸಹಾಯಧನ> <ಸೇವಾಸಿಂದು ಪೊರ್ಟಲ್> <Sevasindu portal> <ಸೇವಾಸಿಂಧು> <Self Employment direct loan scheme>

ಸ್ವಯಂ ಉದ್ಯೋಗ ಮಾಡಲು 50,000 ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Self employment subsidy scheme

ಸ್ವಯಂ ಉದ್ಯೋಗ ಮಾಡಲು 50,000 ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Self employment subsidy scheme 

ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
• ಘಟಕ ವೆಚ್ಚ : ₹1 ಲಕ್ಷ
• ಸಹಾಯಧನ : ₹50,000
ಸಾಲ : ₹50,000 (ಶೇ.4 ರಷ್ಟು ಬಡ್ಡಿದರ)

ಯೋಜನೆ

       ಪರಿಶಿಷ್ಟ ಜಾತಿ ಮಾದಿಗ ಮತ್ತು ಸಂಬಂದಿತ ಜಾತಿಗೆ ಸೇರಿದ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ ಹಾಗೂ ರೈತರಿಂದ ತರಕಾರಿ, ಹಣ್ಣುಗಳನ್ನು ಖರೀದಿ ಮಾಡಿ ತಳ್ಳುವ ಗಾಡಿ ಮೂಲಕ ಮಾರಾಟ ಮಾಡಿ ಸ್ವಯಂ ಉದ್ಯೋಗ ಕೈಗೊಂಡು ಆದಾಯಗಳಿಸಲು ಅವಶ್ಯವಿರುವ ಸಾಲ ಮತ್ತು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು.

ವೈಶಿಷ್ಟ್ಯಗಳು:

ಸ್ವಯಂ ಉದ್ಯೋಗ:

  • ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.
  • ಯೋಜನೆಯ ಘಟಕ ವೆಚ್ಚ ರೂ.1.00 ಲಕ್ಷಗಳಾಗಿದ್ದು, ಈ ಪೈಕಿ ರೂ.0.50 ಲಕ್ಷ ಸಹಾಯಧನ ಮತ್ತು ರೂ.0.50 ಲಕ್ಷ ಸಾಲವಾಗಿರುತ್ತದೆ.
  • ಸಾಲದ ಮೊತ್ತವನ್ನು ಶೇ. 4ರ ಬಡ್ಡಿದರದಲ್ಲಿ 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಮರು ಪಾವತಿಸಬೇಕಾಗುತ್ತದೆ.

ಅರ್ಹತೆ:

  • ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು.
  • ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
  • ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
  • ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

ನಿಯಮಗಳು:

  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ.2.00 ಲಕ್ಷಗಳ ಮಿತಿಯೊಳಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಉದ್ದೇಶಿತ ವ್ಯಾಪಾರ /ಚಟುವಟಿಕೆ ಆಧಾರದ ಮೇಲೆ ಸಾಲ/ಸಹಾಯಧನ ಮಂಜೂರು ಮಾಡಲಾಗುವುದು.
  • ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.
  • ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳಿಗೆ/ಮಾರಾಟಗಾರರಿಗೆ ಬಿಡುಗಡೆ ಮಾಡಲಾಗುವುದು.

ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

  • ಅರ್ಜಿ(Application)
  • ಭಾವಚಿತ್ರ(Photo)
  • ಜಾತಿ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
  • ಆಧಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
  • ಆಧಾರ್ ಕಾರ್ಡ್(Aadhaar card)
  • ಬ್ಯಾಂಕ್ ಪಾಸ್‍ಬುಕ್(Bank passbook)

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://adijambava.karnataka.gov.in/4/self-employment-direct-loan-scheme:/kn