Shakthi Chandramarutha-ಶಕ್ತಿ ಚಂಡಮಾರುತ ಎಫೆಕ್ಟ್,ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
<Krushirushi> <Shakthi chandamarutha> <ಶಕ್ತಿ ಚಂಡಮಾರುತ> <Shathi cyclone> < ಮಳೆ ನಕ್ಷತ್ರಗಳು 2025> <Male nakshatragalu> <Male nakshatragalu 2025> <male Mahiti> <Male munsuchane> <male> <rain forecast> <ಮಳೆ ನಕ್ಷತ್ರ> <ಮಳೆ ನಕ್ಷತ್ರಗಳು> <ಮಳೆ> <ಮಳೆ ಮಾಹಿತಿ> <ಮಳೆ ಮುನ್ಸೂಚನೆ> <ಮುಂಗಾರು ಮಳೆ> <ರೈತ> <ಬೆಳೆಸುದ್ದಿ>

Shakthi Chandramarutha-ಶಕ್ತಿ ಚಂಡಮಾರುತ ಎಫೆಕ್ಟ್,ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದಿಂದ ರಾಜ್ಯದಲ್ಲಿ ವಾರಪೂರ್ತಿ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.5ರಿಂದ 11ರವರೆಗೆ ಗುಡುಗು ಸಹಿತ ಮಳೆಯಾಗಲಿದೆ.
ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚು ಇರಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.5ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಜಾಸ್ತಿ ಇರಲಿದೆ ಎಂದು ಇಲಾಖೆ ಮಾಹಿತಿ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್. ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದ್ದು, ಇಂದಿನಿಂದ 5 ದಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ.
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 6 ಮತ್ತು 7ರಂದು ಕರಾವಳಿಯಲ್ಲಿ ಮಳೆ ಬಿಡುವು ಪಡೆದರೂ, 8ರಿಂದ ದಕ್ಷಿಣ ಕನ್ನಡ ಹಾಗೂ 9ರಿಂದ ಇತರ ಕರಾವಳಿ ಜಿಲ್ಲೆಗಳಲ್ಲಿಯೂ ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಅಥವಾ ಸಂಜೆ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 5ರಿಂದ ಮಲೆನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, 8 ರಿಂದ ಗುಡುಗು ಸಹಿತ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.