ರೈತರು ಬೀಜ ಗೊಬ್ಬರ ಖರೀದಿಸಬೇಕಾದ ಈ ಕೆಲಸ ಮಾಡಿ,ಇಲ್ಲದಿದ್ದರೆ ಸಿಗುವುದಿಲ್ಲ ಪರಿಹಾರ-Subsidy-rate-seeds-and-Fertliser
Subsidy rate seeds and Fertliser-ರೈತರು ಬೀಜ ಗೊಬ್ಬರ ಖರೀದಿಸಬೇಕಾದ ಗಮನಿಸಬೇಕಾದ ಅಂಶಗಳು

Subsidy rate seeds and Fertliser-ರೈತರು ಬೀಜ ಗೊಬ್ಬರ ಖರೀದಿಸಬೇಕಾದ ಗಮನಿಸಬೇಕಾದ ಅಂಶಗಳು
ಮುಂಗಾರು ಹಂಗಾಮಿಗೆ ರೈತರು ಭೂಮಿಯ ಸಿದ್ಧತೆ ಮಾಡಿ ಕೊಳ್ಳುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಸಮೃದ್ಧಿಯಾಗಿ ಸುರಿದು, ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿರುವುದರಿಂದ ರೈತರು ಬಿತ್ತನೆ ಬೀಜ, ಗೊಬ್ಬರ ಖರೀದಿ ಮಾಡಲು ಕೃಷಿ ಇಲಾಖೆ ಸಲಹೆ-ಸೂಚನೆಗಳನ್ನು ನೀಡಿದೆ.
ರೈತರು ರಸಗೊಬ್ಬರವನ್ನು ಖರೀದಿ ಮಾಡುವಾಗ ಯಾವೆಲ್ಲ ಅಂಶಗಳನ್ನು ಪ್ರಮುಖವಾಗಿ ಅನುಸರಿಸಬೇಕು? ಹಾಗೂ ಇದೇ ಮಾದರಿಯಲ್ಲಿ ಬಿತ್ತನೆ ಬೀಜ ಹಾಗೂ ಕೀಟನಾಶಕ ಗಳನ್ನು ಖರೀದಿ ಮಾಡುವಾಗ ಅನುಸರಿಸಬೇಕಾದ ಅಗತ್ಯ ಕ್ರಮಗಳ ಕುರಿತು ಸಹ ಒಂದಿಷ್ಟು ಅಗತ್ಯ ಹಾಗೂ ಬಹುಮುಖ್ಯ ಮಾಹಿತಿಯನ್ನು ಕೃಷಿ ಇಲಾಖೆ ಹಂಚಿಕೊಂಡಿದೆ.
ರೈತರು ಮಾರುಕಟ್ಟೆಯಲ್ಲಿ ಗೊಬ್ಬರ ಖರೀದಿ ಮಾಡುವಾಗ ಗಮನಿಸಬೇಕಾದ ಅಂಶಗಳು
* ರಸಗೊಬ್ಬರವನ್ನು ಯಾವಾಗಲೂ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಬೇಕು
* ರಸಗೊಬ್ಬರ ಚೀಲದ ಬಾಯಿಯನ್ನು ಯಂತ್ರದಿಂದ ಹೊಲಿದಿರಬೇಕು. ಕೈಯಿಂದ ಚೀಲವನ್ನು ಹೊಲಿದಿದ್ದರೆ ಅದಕ್ಕೆ ಸೀಸದಿಂದ ಮೊಹರನ್ನು ಹಾಕಿರುವುದನ್ನು ಗಮನಿಸ ಬೇಕು
* ರಸಗೊಬ್ಬರದ ಚೀಲವು ಸರಿಯಾದ ತೂಕ ಇರಬೇಕು. ಅನುಮಾನವಿದ್ದಲ್ಲಿ ಚೀಲವನ್ನು ತೂಕ ಮಾಡಿ ಖರೀದಿಸಬೇಕು
* ರಸಗೊಬ್ಬರ ಚೀಲದ ಮೇಲೆ ನಮೂದಿಸಿರುವ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು
* ರಸಗೊಬ್ಬರ ಚೀಲದ ಮೇಲೆ ರಸಗೊಬ್ಬರದ ಹೆಸರು, ರಸಗೊಬ್ಬರದ ಬ್ರಾಂಡ್, ರಸಗೊಬ್ಬರ ತಯಾರಕರ ಹೆಸರು ಮತ್ತು ವಿಳಾಸ, ರಸಗೊಬ್ಬರದಲ್ಲಿರುವ ಕನಿಷ್ಠ ಶೇಕಡ ಪೋಷಕಾಂಶಗಳ ವಿವರ, ಗರಿಷ್ಟ ಮತ್ತು ನಿವ್ವಳ ತೂಕ (ಪ್ಯಾಕ್ ಮಾಡಿದಾಗ), ಗರಿಷ್ಟ ಮಾರಾಟ ಬೆಲೆ (ತೆರಿಗೆಗಳನ್ನು ಸೇರಿಸಿ), ತಯಾರಿಸಿದ ತಿಂಗಳು ಮತ್ತು ವರ್ಷ, ಮಿಶ್ರಣ, ವಿಶೇಷ ಮಿಶ್ರಣ ರಸಗೊಬ್ಬರಗಳು, ಲಘು ಪೋಷಕಾಂಶಗಳು ಮತ್ತು ಅವುಗಳ ಮಿಶ್ರಣ ಮತ್ತು ಸೂಪರ್ -ಸ್ಪೇಟ್ ಚೀಲಗಳ ಮೇಲೆ ಬ್ಯಾಚ್ ಸಂಖ್ಯೆ ಮತ್ತು ತಯಾರಿಕಾ ಕಂಪೆನಿಯ ಪರವಾನಗಿ ಪತ್ರ ಇರುವುದನ್ನು ಪರಿಶೀಲಿಸಿ ಖರೀದಿಸಬೇಕು.
* ರಸಗೊಬ್ಬರವನ್ನು ಖರೀದಿಸಿದ್ದಕ್ಕೆ ರಶೀದಿ ಪಡೆಯಬೇಕು. ರಶೀದಿಯಲ್ಲಿ ಖರೀದಿಸಿದ ರಸಗೊಬ್ಬರಗಳ ವಿವರಗಳನ್ನು ತುಂಬಿದ್ದು ರೈತರ ಸಹಿ ಮತ್ತು ಮಾರಾಟಗಾರರ ಸಹಿ ಇರಬೇಕು
* ಕೇಂದ್ರ ಸರ್ಕಾರ ನೀಡುವ ಸಹಾಯಧನದ ಮೊತ್ತವನ್ನು (ಅನ್ವಯವಾಗುವ ಕಡೆ) ಕಡ್ಡಾಯವಾಗಿ ನಮೂದಿಸಿರುವುದನ್ನು ಗಮನಿಸಬೇಕು
ಬಿತ್ತನೆ ಬೀಜವನ್ನು ಖರೀದಿಸುವಾಗ ಗಮನಿಸಬೇಕಾದ ಮುಖ್ಯ ಅಂಶಗಳು:
ರೈತರು ಮಾರುಕಟ್ಟೆಯಲ್ಲಿ ಗೊಬ್ಬರ ಖರೀದಿ ಮಾಡುವಾಗ ಗಮನಿಸಬೇಕಾದ ಅಂಶಗಳು
* ರಸಗೊಬ್ಬರವನ್ನು ಯಾವಾಗಲೂ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಬೇಕು
* ರಸಗೊಬ್ಬರ ಚೀಲದ ಬಾಯಿಯನ್ನುಯಂತ್ರದಿಂದ ಹೊಲಿದಿರಬೇಕು. ಕೈಯಿಂದ ಚೀಲವನ್ನು ಹೊಲಿದಿದ್ದರೆ ಅದಕ್ಕೆ ಸೀಸದಿಂದ ಮೊಹರನ್ನು ಹಾಕಿರುವುದನ್ನು ಗಮನಿಸಬೇಕು
ಕೀಟನಾಶಕ ಖರೀದಿಸುವಾಗ ಗಮನಿಸಬೇಕಾದ ಅಂಶಗಳು:
* ಅಧಿಕೃತ ಬಿತ್ತನೆ ಬೀಜ ಮಾರಾಟಗಾರ ರಿಂದಲೇ ಬಿತ್ತನೆ ಬೀಜವನ್ನು ಖರೀದಿಸಿ
* ಬಿತ್ತನೆ ಬೀಜ ಖರೀದಿಸಿದಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು. ರಶೀದಿಯಲ್ಲಿ ಲಾಟ್‌ನಂಬರ್ ನಮೂದಿಸಿರಬೇಕು
* ಚೀಲದ ಮೇಲೆ ನಮೂದಿಸಿರುವಂತೆ ತೂಕ ಸರಿಯಾಗಿದೆಯೆ ಎಂದು ಖಚಿತಪಡಿಸಿಕೊಂಡು ಖರೀದಿಸಿ
* ಬಿತ್ತನೆ ಬೀಜದ ಉತ್ಪಾದಕರು ಹಾಗೂ ಮಾರಾಟಗಾರರ ವಿಳಾಸವನ್ನು ಗಮನಿಸಬೇಕು
* ಬಿತ್ತನೆ ಬೀಜವು ಸಂಬಂಧಪಟ್ಟ ಪ್ರಾಧಿಕಾರದಿಂದ ಪರೀಕ್ಷಿಸಲ್ಪಟ್ಟು ಗುಣಮಟ್ಟದ ಬಗ್ಗೆ ಧೃಡೀಕರಿಸಲಾಗಿದೆಯೆ? ಧೃಡೀಕರಣದ ಟ್ಯಾಗ್‌ಗಳನ್ನುಲಗತ್ತಿಸಲಾಗಿದೆಯೆ? ಎಂದು ಖಾತರಿಸಿಪಡಿಸಿಕೊಳ್ಳಿ
* ಬಿತ್ತನೆಗೆ ಮುಂಚೆ ಬೀಜ ಮೊಳೆಯುವಿಕೆ ಪ್ರಮಾಣವನ್ನು ಪರೀಕ್ಷಿಸಿಕೊಳ್ಳಬೇಕು
* ಬಿತ್ತನೆ ಬೀಜ, ದೃಢೀಕರಣದ ಬಗ್ಗೆ ಲಗತ್ತಿಸಿರುವ ಟ್ಯಾಗುಗಳನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು
* ನಮೂದಿಸಿರುವ ಉತ್ಪಾದನಾ ದಿನಾಂಕ ಮತ್ತು ವ್ಯಾಲಿಡಿಟಿ ಅವಧಿಯನ್ನು ಗಮನಿಸಬೇಕು
* ಕೀಟನಾಶಕದ ಉತ್ಪಾದನಾ ದಿನಾಂಕ ಹಾಗೂ ಅವಧಿ ಮೀರುವ ದಿನಾಂಕ, ಕೀಟನಾಶಕದ ಉತ್ಪಾದನಾ ದಿನಾಂಕ ಹಾಗೂ ಅವಧಿ ನಮೂದಿಸಲಾಗಿ ದೆಯೆ ಎಂದು ಗಮನಿಸಬೇಕು
- ಕೀಟನಾಶಕದ ಗುಣಮಟ್ಟದ ಬಗ್ಗೆ ಅನುಮಾನವಿದ್ದಲ್ಲಿ ಸಮೀಪದ ಕೀಟನಾಶಕ ಪರಿವೀಕ್ಷಕರ ಪ್ರಯೋಗಾಲಯಕ್ಕೆ ಕಳುಹಿಸಿ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಳ್ಳಬೇಕು
Subsidy seed rate list-ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ
ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.
ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.
ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.