Union budget 2025-ರೈತರಿಗೆ ಭರ್ಜರಿ ನ್ಯೂಸ್ ಕೊಟ್ಟ ಮೋದಿ ಸರ್ಕಾರ
<Krushirushi> <Union budget 2025> <Union budget> <Budget> <ಬಜೇಟ್> <ಕೇಂದ್ರ ಬಜೇಟ್> <ಕೇಂದ್ರ ಬಜೇಟ್-2025>
Union budget 2025-ರೈತರಿಗೆ ಭರ್ಜರಿ ನ್ಯೂಸ್ ಕೊಟ್ಟ ಮೋದಿ ಸರ್ಕಾರ
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಇಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವದ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್ಎಎಫ್ಇಇ, ಎನ್ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ.
2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪವಾಗಿದೆ. ಹೀಗಾಗಿ ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ. ರಫ್ತು ಪ್ರೋತ್ಸಾಹ ಹೂಡಿಕೆ ಮೇಲೆ ಗಮನ ಹರಿಸಿದೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ