Vayubara kusitha-ವಾಯುಭಾರ ಕುಸಿತದಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರೆಯಲಿದೆ ಮಳೆಯ ಅರ್ಭಟ
Vayubara kusitha-ವಾಯುಭಾರ ಕುಸಿತದಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರೆಯಲಿದೆ ಮಳೆಯ ಅರ್ಭಟ

Vayubara kusitha-ವಾಯುಭಾರ ಕುಸಿತದಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರೆಯಲಿದೆ ಮಳೆಯ ಅರ್ಭಟ
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಸಹ ಇರಬಹುದು.
ಈಗಿನಂತೆ ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಬಿರುಸು ಪಡೆಯುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 7ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಸೆಪ್ಟೆಂಬರ್ 5ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆ ಇರಬಹುದು. ( ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ).
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.
ಬಂಗಾಳಕೊಲ್ಲಿಯ ಥೈಲ್ಯಾಂಡ್ ಉತ್ತರ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 2ರಂದು ಪಶ್ಚಿಮ ಬಂಗಾಳ ಅಥವಾ ಒಡಿಸ್ಸಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಮುಂಗಾರು ಚುರುಕುಗೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.