ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷದವರೆಗೆ ಸಹಾಯಧನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Women development schemes
<Krushirushi> <ಮಹಿಳಾ ಅಭಿವೃದ್ದಿ ಇಲಾಖೆ> <ಮಹಿಳಾ ಅಭಿವೃದ್ದಿ ನಿಗಮ> <ಮಹಿಳಾ ಅಭಿವೃದ್ದಿ ಇಲಾಖೆ ಯೋಜನೆಗಳು> <ಉದ್ಯೋಗಿನಿ ಯೋಜನೆ> <ಚೇತನಾ ಯೋಜನೆ> <ಧನಶ್ರೀ ಯೋಜನೆ> <Women development schemes> <women development> <Women development department> <women development yojane> <women and children health> <Udyogini yojane> <chetana yojane> <Danasree yojane> <ಹಣ> <ಆಧಾರ್> <ಸಂದಾಯ> <ಸಹಾಯಧನ> <ನೇರ ಲಾಭ ವರ್ಗಾವಣೆ> < ನೇರ ನಗದು ವರ್ಗಾವಣೆ>
ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷದವರೆಗೆ ಸಹಾಯಧನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Women development schemes
2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಿನ್ನೆಯಿಂದ ಸೆಪ್ಟೆಂಬರ್ 30ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಉದ್ಯೋಗಿನಿ ಯೋಜನೆ(Udyogini Yojana)
ಉದ್ಯೋಗಿನಿ ಯೋಜನೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ವಯೋಮಿತಿ 18 ರಿಂದ 55 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ : ಆದಾಯ ಮಿತಿ : ರೂ. 2.00 ಲಕ್ಷಗಳು
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ(Lingayat Alpa sankyathara punarvasathi Yojana) ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು
ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ :
ಆದಾಯ ಮಿತಿ : ರೂ. 1.50 ಲಕ್ಷಗಳು
ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
ಸಹಾಯಧನ ಶೇ.30 ರಷ್ಟು
ಚೇತನ ಯೋಜನೆ(Chetana Yojana)
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು.
ಧನಶ್ರೀ ಯೋಜನೆ(Dhanashree Yojana)
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು.
ವಿಶೇಷ ಸೂಚನೆ :
* ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳಕರ್ ರವರು ಮಾನ್ಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ ರವರೊಂದಿಗೆ ಚರ್ಚಿಸುತ್ತಿರುವುದು.
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು /ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವುದು.
* ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka, gov.in ನಲ್ಲಿ ಲಭ್ಯವಿರುತ್ತದೆ.
* ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
* ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/
https://sevasindhu.karnataka.gov.in ಅರ್ಜಿದಾರರು ಮಾನ್ಯ ಸಚಿವರು, ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ | KARNATAKA ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಅರ್ಜಿ ಸಲ್ಲಿಸಲು ದಿನಾಂಕ : 21.08.2024 ರ ಬೆಳಿಗ್ಗೆ 10.00 ಗಂಟೆಯಿಂದ 30.09.2024 ರ ಸಂಜೆ 5.30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in ) ಸಂಪರ್ಕಿಸುವುದು.