Yashsvini yojane 2025-5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಜನೇವರಿ 31 ಕೊನೆಯ ದಿನಾಂಕ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
<Krushirushi> <Yashsvini yojane> <Yashsvini> <ಯಶಸ್ವಿನಿ> <ಯಶಸ್ವಿನಿ ಯೋಜನೆ> <ಉಚಿತ ಚಿಕಿತ್ಸೆ> <Free treatment>
Yashsvini yojane 2025-5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಜನೇವರಿ 31 ಕೊನೆಯ ದಿನಾಂಕ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಜ.31ರವರೆಗೆ ಅವಕಾಶ ಕಲ್ಪಿಸಿದೆ.
ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ.
Yashsvini yojane-ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಸಿಗಲಿವೆ ಈ ಸೌಲಭ್ಯಗಳು
2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.
ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ಟ್ರಸ್ಟ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698