Karnataka rain alert-ವಾಯುಭಾರ ಕುಸಿತ,ಏಪ್ರೀಲ್ 11ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka rain alert-ವಾಯುಭಾರ ಕುಸಿತ,ಏಪ್ರೀಲ್ 11ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

Karnataka rain alert-ವಾಯುಭಾರ ಕುಸಿತ,ಏಪ್ರೀಲ್ 11ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಏಪ್ರಿಲ್ 6 ರಂದು ಕರಾವಳಿ ಕರ್ನಾಟಕದ ಕೆಲವೆಡೆ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳ ಕರ್ನಾಟಕದಲ್ಲಿಯೂ ಮಳೆ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

 

ಬೆಂಗಳೂರು ಸೇರಿದಂತೆ ಎಲ್ಲೆಲ್ಲಿ ಮಳೆ?

ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ 40-50 kmph ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 40-50 ಕಿಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ

ದಕ್ಷಿಣ ಒಳ ಕರ್ನಾಟಕ ಭಾಗದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ 30-40 kmph ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಲಘು ಮಳೆ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯ ಹವಾಮಾನ

ಏಪ್ರಿಲ್ 7ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ 30-40 kmph ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳ ಕರ್ನಾಟಕ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ


ಮಂಗಳವಾರ ಏಪ್ರಿಲ್- 8

ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ, ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.
ದಕ್ಷಿಣ ಒಳ ಕರ್ನಾಟಕ:ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.

ಬುಧವಾರ ಎಲ್ಲೆಲ್ಲಿ ಮಳೆ?

ಏಪ್ರಿಲ್ 9 ರಂದು ಕರಾವಳಿ ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಂದೇ ಉತ್ತರ ಒಳ ಕರ್ನಾಟಕ: ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿ ಣ ಒಳ ಕರ್ನಾಟಕದಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.


ಏಪ್ರಿಲ್ 10-11 ರಂದು ಎಲ್ಲೆಲ್ಲಿ ಮಳೆ?

ಏಪ್ರಿಲ್10 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 11ರಂದು ಕರಾವಳಿ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ. ಉತ್ತರ ಒಳ ಕರ್ನಾಟಕ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿಣ ಒಳ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಾ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


12 ನೇ ಏಪ್ರಿಲ್

ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.