Karnataka rain alert-ಸೈಕ್ಲೋನ್ ಎಫೆಕ್ಟ್ , ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

ಹಾವಾಮಾನ ಇಲಾಖೆಯ ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎಂದು ತಿಳಿಸಿದೆ.

Karnataka rain alert-ಸೈಕ್ಲೋನ್ ಎಫೆಕ್ಟ್ , ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

Karnataka rain alert-ಸೈಕ್ಲೋನ್ ಎಫೆಕ್ಟ್ , ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ. 


ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದ‌ರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. 
ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಲಾಗಿದೆ. 

ಹಾವಾಮಾನ ಇಲಾಖೆಯ ಮುಂದಿನ ಮೂರು ದಿನ ರಾಜ್ಯದಾದ್ಯಂತ ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎಂದು ತಿಳಿಸಿದೆ. ಇಂದಿನ ಮುನ್ಸೂಚನೆ ಪ್ರಕಾರ, ಮುಂದಿನ ಮೂರು ಗಂಟೆಗಳಲ್ಲಿ ಚಿತ್ರದುರ್ಗ, ಮೈಸೂರು, ಬೆಳಗಾವಿ, ಕೊಪ್ಪಳ, ವಿಜಯಪುರ, ಗದಗ ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಇದರಲ್ಲಿ ಕೆಲವೆಡೆ ಆಲಿಕಲ್ಲು ಸಹಿತ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.


ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. 

ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ  ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ  ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.