Karnataka rain alert-ಮಳೆ ಕರ್ನಾಟಕದವರ ಬೆನ್ನು ಬಿಡೋ ಹಾಗೆ ಕಾಣ್ಣಿಲ್ಲ,ಈ ಜಿಲ್ಲೆಗಳಲ್ಲಿ ಸುರಿಯಲಿದೆ ಈ ವಾರ ಮಳೆ
<Karnataka rain alert> <rain forecast> <male Mahithi> <mungaru male>
Karnataka rain alert-ಮಳೆ ಕರ್ನಾಟಕದವರ ಬೆನ್ನು ಬಿಡೋ ಹಾಗೆ ಕಾಣ್ಣಿಲ್ಲ,ಈ ಜಿಲ್ಲೆಗಳಲ್ಲಿ ಸುರಿಯಲಿದೆ ಈ ವಾರ ಮಳೆ
ರ್ನಾಟಕದಲ್ಲಿ ವಾತಾವರಣ ಮತ್ತೆ ಮಳೆಯ ಅಬ್ಬರಕ್ಕೆ ತಯಾರಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ರಚನೆಯಾಗುತ್ತಿರುವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಮಳೆ ಹೆಚ್ಚಾದಂತೆ ಮುಂದಿನ ವಾರ ರಾಜ್ಯದ ತಾಪಮಾನವೂ ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯುವ ನಿರೀಕ್ಷೆಯಿದೆ.
ಕರಾವಳಿ ಭಾಗಗಳಲ್ಲಿ ಮಳೆಯ ಜೊತೆಗೆ ಗುಡುಗು- ಮಿಂಚು ಮತ್ತು ಬಿರುಗಾಳಿಯೂ ಬೀಸುವ ಸಾಧ್ಯತೆ ಇದ್ದು, ನಿವಾಸಿಗಳು ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ಇಲಾಖೆ ಸೂಚಿಸಿದೆ. ಉಡುಪಿ, ದಕ್ಷಿಣ ಕನ್ನಡ, ಕೋಲಾರ ದಕ್ಷಿಣ ಒಳನಾಡು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದೇ ರೀತಿ ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದ ಚಲನವಲನವೇ ಈ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದ್ದು, ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ, ಸೌಮ್ಯ ಗಾಳಿ ಮತ್ತು ತಂಪಾದ ಹವಾಮಾನ ಮುಂದುವರಿಯಲಿದೆ
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 6ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಳೆಯ ಮುನ್ಸೂಚೆನೆ ಒಂದೊಂದೇ ದಿನ ಮುಂದೆ ಸರಿಯುತ್ತಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 6ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ನವೆಂಬರ್ 4ರಿಂದ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
ಆದರೆ ಉತ್ತರ ಭಾರತದ ಕಡೆಯಿಂದ ಛಳಿ ಗಾಳಿಯು ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.

