ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ-Karnataka rain alert imd
ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ-Karnataka rain alert imd
ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯು ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ತಗ್ಗು ಕರ್ನಾಟಕದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ. ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
5 ದಿನ ಮಳೆ
ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾದ್ಯತೆ ಇದೆ ಎಂದು ಹೇಳಿದೆ. ಅಂತೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ
ಇನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ : ಕಾಸರಗೋಡು - ಕರ್ನಾಟಕದ ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಆಗುಂಬೆ, ಶಿೃಂಗೇರಿ ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 29ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 1ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಮೋಡದ ವಾತಾವರಣ ಇರಬಹುದು.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಮೇ 1ರಿಂದ ದಕ್ಷಿಣ ಒಳನಾಡು ಹಾಗೂ ಮೇ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.
ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.
ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.
ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.
ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.
ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.cdotindia.capsachet
ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ
ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ
ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ