Krushibhagya Krushihonda-24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

<Krushirushi> <ಕೃಷಿಹೊಂಡ> <ಕೃಷಿಭಾಗ್ಯ> <Krushihonda> <Krushibhagya> <Farmpond>

Krushibhagya Krushihonda-24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

Krushibhagya Krushihonda-24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ

ಅರ್ಜಿ ಸಲ್ಲಿಕೆ

ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು.

ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಹಾಗೂ ಹೋಬಳಿಗೆ ನಿಗದಿಪಡಿಸಿದ ಗುರಿಗಳನ್ವಯ ಕಾರ್ಯಕ್ರಮ ಅನುಷ್ಠಾನಗೊಳಿಸುವುದು

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ರೈತರ ಅರ್ಜಿ

ರೈತರ ಭಾವಚಿತ್ರ

FID (FID ಇಲ್ಲವಾದಲ್ಲಿ ಆಧಾರ್‌ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್‌ ಪಾಸ್‌ ಬುಕ್ ಪ್ರತಿ)

ಕೃಷಿ ಭಾಗ್ಯ ಪ್ಯಾಕೇಜ್‌ ನಲ್ಲಿ ಈ ಕೆಳಕಂಡ ಘಟಕಗಳು ಒಳಗೊಂಡಿದೆ

ಕ್ಷೇತ್ರ ಬದು ನಿರ್ಮಾಣ

ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಪೋಲಾಗದಂತೆ ಅದೇ ಜಮೀನಿನಲ್ಲಿ ಇಂಗಿಸಲು ಹಾಗೂ ಕೃಷಿ ಹೊಂಡದಲ್ಲಿ ಸಂಗ್ರಹಿಸಲು ಕ್ಷೇತ್ರ ಬದು ನಿರ್ಮಾಣ.

ಕೃಷಿ ಹೊಂಡ

ಎಲ್ಲಾ ರೀತಿಯ ಮಣ್ಣುಗಳಲ್ಲಿ ಮಳೆ ನೀರು ಸಂಗ್ರಹಣೆಗಾಗಿ ವಿವಿಧ ಅಳತೆಯ (10x10x3 ಮೀ, 12x12x3 2, 15x15x3, 18x18x3 21x21x3 ಮೀ) ಕೃಷಿ ಹೊಂಡಗಳ ನಿರ್ಮಾಣ.

ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Fencing)

ಕೃಷಿ ಹೊಂಡದಲ್ಲಿ ಆಕಸ್ಮಿಕ ಅವಘಡಗಳು/ ಪ್ರಾಣ ಹಾನಿ ಸಂಭವಿಸದಂತೆ ತಡೆಯಲು ಕಡ್ಡಾಯವಾಗಿ ತಂತಿ ಬೇಲಿ ನಿರ್ಮಾಣ.

ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್

ಕೃಷಿ ಹೊಂಡದಲ್ಲಿ ಸ೦ಗ್ರಹಣೆಯಾದ ನೀರನ್ನು ಬೆಳೆಗಳಿಗೆ ಬಳಸಿಕೊಳ್ಳಲು ಡೀಸೆಲ್ /ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಖರೀದಿಸಲು ಅವಕಾಶ

ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ

ಕೃಷಿ ಹೊಂಡಗಳಲ್ಲಿ ಸಂಗ್ರಹವಾದ ಮಳೆ ನೀರನ್ನು ಬೆಳೆಗಳಿಗೆ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿಗಾಗಿ ಬಳಸಿಕೊಳ್ಳಲು ಸೂಕ್ಷ್ಮ ನೀರಾವರಿ ಘಟಕ ಅನುಷ್ಠಾನ

Krishi bhagya yojane-90% ಸಬ್ಸಿಡಿಯಲ್ಲಿ ಕೃಷಿಹೊಂಡ,ಡಿಸೇಲ್ ಪಂಪಸೆಟ್,ಹನಿ/ತುಂತುರುನೀರಾವರಿ ಪರಿಕರ ವಿತರರಣೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕ

ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಸದಾಶಯದೊಂದಿಗೆ ರೂ. 100 ಕೋಟಿ ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುಲಾಗುತ್ತಿದೆ.


ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್ ಅಥವಾ ಸೋಲಾರ್ ಪಂಪ್‌ಸೆಟ್, ನೀರನ್ನು ಬೆಳೆಗೆ ಹಾಯಿಸಲು ಹನಿ, ತುಂತುರು ನೀರಾವರಿ ಪರಿಕರಗಳ ವಿತರಣೆ ಮಾಡಲಾಗುತ್ತದೆ.


ರೈತರ ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್ ನಲ್ಲಿ ಕನಿಷ್ಠ 1 ಎಕರೆ ಇರಬೇಕು, ಇಲ್ಲವಾದಲ್ಲಿ ರೈತರ 1 ಎಕರೆ ಸಾಗುವಳಿ ಕ್ಷೇತ್ರವು ಒಂದಕ್ಕಿಂತ ಹೆಚ್ಚು ಸರ್ವೆ ನಂಬರ್ ನಲ್ಲಿ ಒಂದೇ ಪ್ರದೇಶದಲ್ಲಿ ಇರುಬೇಕು. ಇದು ಕನಿಷ್ಠ ಐದು ಎಕರೆ ಪ್ರದೇಶದಿಂದ ನೀರು ಶೇಖರಣೆಯಾಗುವಂತಿರಬೇಕು. ಈಗಾಗಲೇ ಈ ಯೋಜನೆ, ಇತರೆ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.


ಫಲಾನುಭವಿಯು ಒಂದೇ ಇಲಾಖೆಯಿಂದ ಹಾಗೂ ಒಂದೇ ಯೋಜನೆಯಿಂದ ಸಹಾಯಧನವನ್ನು ಪಡೆಯುವುದನ್ನು ಖಾತ್ರಿ ಪಡಿಸಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಇತರೆ ಇಲಾಖೆಗಳಿಂದ ದೃಢೀಕರಣ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://raitamitra.karnataka.gov.in/storage/pdf-files/kby20231.pdf