Dharwad krishimela 2023 live-ನಿಮ್ಮ ಮೊಬೈಲ್ ನಲ್ಲೇ ನೋಡಿ ಧಾರವಾಡ ಕೃಷಿಮೇಳ
<Krushirushi> <ಧಾರವಾಡ ಕೃಷಿಮೇಳ> <Dharwad krishimela-2023> <ಕೃಷಿಮೇಳ> <krishimela>

Dharwad krishimela-2023 ನಾಲ್ಕು ದಿನಗಳ ಧಾರವಾಡ ಕೃಷಿಮೇಳದ ವೇಳಾಪಟ್ಟಿ,ಈ ವರ್ಷದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರಕಟ
ಧಾರವಾಡ ಕೃಷಿಮೇಳದ ವಿಡಿಯೋ ಝಲಕ್ ನಿಮಗಾಗಿ
https://youtu.be/r7KxsRCKa2w?si=Fh72XQYXs1JZ1EVo
ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 9ರಿಂದ 12ರವರೆಗೆ ‘ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು’ ಶೀರ್ಷಿಕೆಯಡಿ ಕೃಷಿ ಮೇಳ ನಡೆಯಲಿದೆ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್.ಪಾಟೀಲ ತಿಳಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ 9ರಂದು ಬೆಳಿಗ್ಗೆ 11.30ಕ್ಕೆ ಮೇಳ ಉದ್ಘಾಟಿಸುವರು. ಕೃಷಿ ಸಚಿವ ಎನ್. ಚಲುರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ‘ರೈತರಿಂದ ರೈತರಿಗಾಗಿ’ ಕಾರ್ಯಕ್ರಮ ಆಯೋಜಿಸಲಾಗಿದೆ.10 ರಂದು ಬೀಜ ಮೇಳ ಉದ್ಘಾಟನೆ, 11ರಂದು ಪೌಷ್ಟಿಕತೆ ಮತ್ತು ಆರ್ಥಿಕ ಭದ್ರತೆಗೆ ಸಿರಿಧಾನ್ಯಗಳು ವಿಚಾರ ಸಂಕಿರಣ ಹಾಗೂ 12ರಂದು ಚರ್ಚಾ ಗೋಷ್ಠಿ, ಮಧ್ಯಾಹ್ನ 4 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೇಳದಲ್ಲಿ ಕೃಷಿ ಮತ್ತು ಕೃಷಿ ಪೂರಕ ತಂತ್ರಜ್ಞಾನ, ಹೈಟೆಕ್ ತೋಟಗಾರಿಕೆ, ಫಲಪುಷ್ಪ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ ಹಾಗೂ ಜಾನುವಾರು ಪ್ರದರ್ಶನ ಆಯೋಜಿಸಲಾಗಿದೆ. ಕೃಷಿ ವಸ್ತುಪ್ರದರ್ಶನದಲ್ಲಿ 199 ಹೈಟೆಕ್ ಮಳಿಗೆ, 351 ಸಾಮಾನ್ಯ ಮಳಿಗೆ, 24 ಯಂತ್ರೋಪಕರಣ ಮಳಿಗೆ, 40 ಆಹಾರ ಮಳಿಗೆ, 50 ಜಾನುವಾರು ಪ್ರದರ್ಶನ ಮಳಿಗೆ ಹಾಗೂ 10 ಕ್ಷೇತ್ರ ಮಳಿಗೆ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿದ್ಯಾಲಯ ಸಂಶೋಧಿಸಿರುವ 24 ಹೊಸ ತಳಿಗಳು ಹಾಗೂ 33 ಕೃಷಿ ತಾಂತ್ರಿಕತೆಗಳು ಬಿಡುಗಡೆಯಾಗಲಿವೆ. ಬಿತ್ತನೆ ಬೀಜಗಳನ್ನು ಮಾರಲಾಗುವುದು’ ಎಂದು ಅವರು ವಿವರಿಸಿದರು.
‘ವಿಶ್ವವಿದ್ಯಾಲಯಕ್ಕೆ ಪ್ರಥಮ ಬಾರಿಗೆ ಉತ್ಪನ್ನ ಹಾಗೂ ಮಾರಾಟಕ್ಕೆ ಪರವಾನಗಿ ಪತ್ರ ದೊರೆತಿದೆ. 25 ಕ್ವಿಂಟಲ್ ವಿವಿಧ ಜೈವಿಕ ಗೊಬ್ಬರಗಳ ಪುಡಿ ಹಾಗೂ 2.6 ಸಾವಿರ ಲೀಟರ್ ವಿವಿಧ ಜೈವಿಕ ಗೊಬ್ಬರ ದ್ರವಗಳು, 16 ಕ್ವಿಂಟಲ್ ಜೈವಿಕ ಪೀಡೆನಾಶಕಗಳು ಕೃಷಿ ಮೇಳದಲ್ಲಿ ಮಾರಾಟಕ್ಕೆ ಇಡಲಾಗುವುದು’ ಎಂದರು.
ಸೆ. 10ರಂದು ಮಧ್ಯಾಹ್ನ 2.30ಕ್ಕೆ ‘ಬದಲಾಗುತ್ತಿರುವ ಜೀವನಶೈಲಿ ಹಾಗೂ ಹವಾಮಾನ ವೈಪರೀತ್ಯ’ ವಿಚಾರಗೋಷ್ಠಿ ನಡೆಯಲಿದೆ. 11ರಂದು ಮಧ್ಯಾಹ್ನ 4.30 ಕನ್ನಡ ಕೃಷಿಗೋಷ್ಠಿ ಜರುಗಲಿದೆ. ಸೆ. 12ರಂದು ಮಧ್ಯಾಹ್ನ 2.30 ಕ್ಕೆ ಮಣ್ಣು ಮತ್ತು ನೀರಿನ ಸಂರಕ್ಷಣೆ ಹಾಗೂ ಸದ್ಭಳಕೆ ವಿಚಾರಗೋಷ್ಠಿ ನಡೆಯಲಿದೆ. ಸೆ. 12ರಂದು ನಡೆಯಲಿರುವ ಸಮಾರೋಪಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಶ್ರೇಷ್ಠ ಕೃಷಿಕ ಪ್ರಶಸ್ತಿ
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ 7 ಪುರುಷರು ಮತ್ತು 7 ಮಹಿಳೆಯರು ಸೇರಿ ಒಟ್ಟು 14 ಕೃಷಿಕರನ್ನು 2023ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಹೊಸಟ್ಟಿ ಗ್ರಾಮದ ಫಕೀರಪ್ಪ ಮುರಾರಿ ಹೊನ್ನಾಪುರದ ನಾಗವ್ವಾ ಅಮೃತಾ ಮಾರಿಹಾಳ ಬೆಳಗಾವಿ ಜಿಲ್ಲೆ ಕಲ್ಲೋಳಿಯ ರಮೇಶ ಖಾನಗೌಡ್ರ ಸಿದ್ದನಬಾವಿಯ ಸುವರ್ಣಾ ಹಾದಿಮನಿ ಹಾವೇರಿ ಜಿಲ್ಲೆ ಗೊಂದಿಯ ಲಕ್ಷ್ಮಣ ಕೋಡಿಹಳ್ಳಿ ಕಳಸೂರಿನ ಅನ್ನಪೂರ್ಣ ಚಿಗರಿ ಗದಗ ಜಿಲ್ಲೆಯ ಕುರ್ತಕೋಟಿಯ ಅಶೋಕ ಹಾಳಕೇರಿ ಕಬಲಾಯದಕಟ್ಟಿಯ ಗೀತಾ ದೊಡ್ಡಮನಿ ವಿಜಯಪುರ ಜಿಲ್ಲೆ ಹೆಗಡಿವಾಳದ ಕಾಸಿರಾಯನಗೌಡ ಬಿರಾದಾರ ನಂದಿಹಾಳದ ಕಲ್ಪನಾ ದೊಡ್ಡಮನಿ ಬಾಗಲಕೋಟೆ ಜಿಲ್ಲೆ ಬಂಕನೇರಿಯ ಬಸಪ್ಪ ಬೂದಿ ಕುಳಲಿಯ ಕಾವೇರಿ ಗಣಿ ಹಾಗೂ ಉತ್ತರ ಕನ್ನಡ ಜಿಲ್ಲೆ ಹುಲಿಕೊಂಡದ ಬಸವರಾಜ ನಡುವಿನಮನಿ ಮತ್ತು ಕೊಪ್ಪದ ಅನ್ನಪೂರ್ಣ ಬೆಣ್ಣೆ. ಚನ್ನವೀರ ಕಣವಿ ಲೇಖನ ಪುರಸ್ಕಾರ: ಬೆಂಗಳೂರಿನ ವೆಂಕಟ್ರಮಣ ಹೆಗಡೆ ಅವರ ‘ರಸಗೊಬ್ಬರ ಬಳಸಿದರೆ ಮಣ್ಣು ಹಾಳಾಗುತ್ತಾ?’ ಲೇಖನ 2023ನೇ ಸಾಲಿನ ಚನ್ನವೀರ ಕಣವಿ ಲೇಖನ ಪ್ರಶಸ್ತಿಗೆ ಆಯ್ಕೆಯಾಗಿದೆ.
ಸಿರಿಧಾನ್ಯಗಳ ವರ್ಷ
ಕೃಷಿಕರಿಗೆ ಮಾಹಿತಿ ಪ್ರಸ್ತುತ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಆಚರಿಸಲಾಗುತ್ತಿದೆ. ಸಾವಯವ ಕೃಷಿಯಲ್ಲಿ ಸಿರಿ ಧಾನ್ಯಗಳ ಉತ್ಪಾದನೆ ಅವುಗಳ ಮೌಲ್ಯವರ್ಧನೆಗೆ ಮೇಳದಲ್ಲಿ ಒತ್ತು ನೀಡಲಾಗುವುದು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್.ಪಾಟೀಲ ತಿಳಿಸಿದರು. ಸಿರಿಧಾನ್ಯ ಮಾರುಕಟ್ಟೆ ನೈಸರ್ಗಿಕ ಮತ್ತು ಸಾವಯವ ಕೃಷಿ ಮಣ್ಣಿನ ಫಲವತ್ತತೆ ರಕ್ಷಣೆ ಮಳೆ ನೀರು ಸಂಗ್ರಹ ಮತ್ತು ಅಂತರ್ಜಲ ಮರುಪೂರಣ ಕಿಸಾನ್ ಡ್ರೋನ್ ಬಳಕೆ ರೈತರ ಆವಿಷ್ಕಾರಗಳು ಸಾಧಕ ರೈತ ಹಾಗೂ ರೈತ ಮಹಿಳೆಯರೊಂದಿಗೆ ಸಂವಾದ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಧಾರವಾಡ ಕೃಷಿಮೇಳವನ್ನು ನಿಮ್ಮ ಮೊಬೈಲ್ ನಿಂದಲೇ ಲೈವ್ ನೋಡಲು Krushi Rushi YouTube Channel ಗೆ ಬೇಟಿಕೊಡಿ
https://youtu.be/KUwLlLFhz28?si=no_40lZEFK44NFPq
ಇದನ್ನೂ ಓದಿ
ಇನ್ನೂ 8 ರಿಂದ 9 ಲಕ್ಷ ಗೃಹಿಣೆಯರಿಗೆ ತಾಂತ್ರಿಕ ಕಾರಣದಿಂದ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ.ಅದನ್ನು ಸರಿಪಡಿಸಿ ಶನಿವಾರದ ಒಳಗಡೆ ಹಣ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.
Gruhalakshmi Message-ನಿಮಗೆ ಗೃಹಲಕ್ಷ್ಮಿ ಹಣ ಜಮಾ ಮೇಸೆಜ್ ಬಂದಿಲ್ಲವೇ,ಹಾಗಾದರೆ ಹೀಗೆ ಚೆಕ್ ಮಾಡಿ
ಈ ಮೇಲಿನಂತೆ ನಿಮಗೆ ಮೇಸೆಜ್ ಬಂದಿಲ್ಲವೇ?
ಹಾಗಾದರೆ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು 8147500500 ನಂಬರ್ ಗೆ ಮೇಸೆಜ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಅರ್ಜಿ ಸ್ಥಿತಿ ತಿಳಿಯಲಿದೆ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನೇರ ನಗದು ವರ್ಗಾವಣೆ ಮೂಲಕ ನಿಮಗೆ ಜಮಾ ಆಗಿರುವ ಯೋಜನೆಗಳ ಮಾಹಿತಿ ದೊರೆಯಲಿದೆ.
ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಜಮಾ ಆಗಿದ್ದರೆ,ಇಲ್ಲಿ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253