Milk incentive-ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ,ಇಲ್ಲಿಯವರೆಗೂ ಎಷ್ಟು ಪ್ರೋತ್ಸಾಹಧನ ಜಮಾ ಆಗಿದೆ ಚೆಕ್ ಮಾಡಿ
<Krushirushi> <Milk incentive amount> <ಹಾಲಿನ ಪ್ರೋತ್ಸಾಹಧನ> <KMF> <Karnataka milk federation> <Milk incentive status> <Milk incentive status checking link> <ಕೆಎಂಎಫ್> <milk> <ಹಾಲು> <ರೈತ> <ಹಣ> <ಸಂದಾಯ> <ಡಿಬಿಟಿ> <ನೇರ ಲಾಭ ವರ್ಗಾವಣೆ> <dbt> <DBT Karnataka> <direct benefit transfer> <DBT app> <DBT Karnataka application> <ಸಹಾಯಧನ>
Milk incentive-ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ,ಇಲ್ಲಿಯವರೆಗೂ ಎಷ್ಟು ಪ್ರೋತ್ಸಾಹಧನ ಜಮಾ ಆಗಿದೆ ಚೆಕ್ ಮಾಡಿ
ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು.
ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.
ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

